ಬೈಕ್ ಸ್ಕಿಡ್: ಸವಾರ ಮೃತ್ಯು
ಕಾರ್ಕಳ, ಫೆ.11: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಜೋಡುಕಟ್ಟೆಯ ಪವರ್ ಪಾಯಿಂಟ್ ಬಳಿ ಫೆ.10ರಂದು ರಾತ್ರಿ ನಡೆದಿದೆ.
ಮೃತರನ್ನು ಉಮೇಶ್ ಎಂದು ಗುರುತಿಸಲಾಗಿದೆ. ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಉಮೇಶ್, ಚಿಕಿತ್ಸೆ ಫಲಕಾರಿಯಾಗದೆ ಫೆ.11ರಂದು ಬೆಳಗಿನ ಜಾವ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story