ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತ್ಯು
ಕೋಟ, ಫೆ.12: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟಿನಿಂದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಸುಧೀರ್ ಎಂದು ಗುರುತಿಸಲಾಗಿದೆ. ಇವರು ಫೆ.10ರಂದು ಸಂಜೆ ಮಲ್ಪೆಯ ಸತೀಶ್ ಎಂಬವರ ಬೋಟಿನಲ್ಲಿ ಇತರ ಮೀನುಗಾರ ರೊಂದಿಗೆ ಮೀನುಗಾರಿಕೆಗೆ ತೆರಳಿದ್ದು, ರಾತ್ರಿ ವೇಳೆ ಹಂಗಾರಕಟ್ಟೆ ಸಮೀಪದ ಸಮುದ್ರದಲ್ಲಿ ಬಲೆ ಹಾಕಿ ಮೀನುಗಾರಿಕೆ ಮಾಡುತ್ತಿರುವಾಗ ಸುಧೀರ್ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ.
ಇವರ ಮೃತದೇಹವು ಫೆ.11ರಂದು ಬೆಳಿಗ್ಗೆ 7 ಗಂಟೆಗೆ ಕೋಡಿಕನ್ಯಾಣದ ಕ್ವಾಲಿಟಿ ಸೀ ಫುಡ್ ಪ್ಯಾಕ್ಟರಿ ಬಳಿಯ ಸಮುದ್ರದಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story