ಪೇರಡ್ಕ: ರಸ್ತೆಯಲ್ಲೇ ಮಗುಚಿಬಿದ್ದ ಬಸ್, ಹಲವರಿಗೆ ಗಾಯ
ಕಡಬ, ಫೆ.16: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿಬಿದ್ದ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಪೇರಡ್ಕ ಎಂಬಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ.
ಶನಿವಾರ ರಾತ್ರಿ ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಖಾಸಗಿ ಬಸ್ ಪೇರಡ್ಕ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಈ ಸಂದರ್ಭ ಬಸ್ಸಿನಲ್ಲಿ 35 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.