ಅಡ್ಡಹೊಳೆ: ಮದುವೆಗೆ ತೆರಳುತ್ತಿದ್ದ ಟೆಂಪೋ ಪಲ್ಟಿ; 20 ಮಂದಿಗೆ ಗಾಯ
ಕಡಬ, ಫೆ.16: ಟೂರಿಸ್ಟ್ ಟೆಂಪೋವೊಂದು ಉರುಳಿಬಿದ್ದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ.
ಪುತ್ತೂರಿನಲ್ಲಿ ನಡೆಯುವ ವಿವಾಹ ಸಮಾರಂಭಕ್ಕೆ ಸಕಲೇಶಪುರದಿಂದ ಹೊರಟಿದ್ದ ಮಿನಿಬಸ್ ಅಡ್ಡಹೊಳೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದರಿಂದ ಮಿನಿಬಸ್ಸಿನಲ್ಲಿದ್ದ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story