ದ.ಕ. ಜಿಲ್ಲಾ ರೆಡ್ಕ್ರಾಸ್ಗೆ ‘ಬೆಸ್ಟ್ ಪರ್ಫಾಮಿಂಗ್ ಅವಾರ್ಡ್’
ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್
ಮಂಗಳೂರು, ಫೆ.16: ಭಾರತೀಯ ರೆಡ್ಕ್ರಾಸ್ ಸೊಸೈಟಿ ನೀಡುವ ‘ಬೆಸ್ಟ್ ಪರ್ಫಾಮಿಂಗ್ ಅವಾರ್ಡ್’ ಪ್ರಶಸ್ತಿಯನ್ನು ದ.ಕ. ಜಿಲ್ಲಾ ರೆಡ್ಕ್ರಾಸ್ ಘಟಕವು ಪಡೆದಿದೆ.
ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲ ಅವರಿಂದ ರೆಡ್ಕ್ರಾಸ್ನ ದ.ಕ. ಘಟಕದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭ ರೆಡ್ಕ್ರಾಸ್ನ ರಾಷ್ಟ್ರೀಯ ಸಮಿತಿಯ ಸದಸ್ಯ ಬಸರೂರು ರಾಜೀವ್ ಶೆಟ್ಟಿ, ಕರ್ನಾಟಕ ಘಟಕದ ಚೇರ್ಮನ್ ಎಸ್.ನಾಗಣ್ಣ, ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮಾ, ವೈಸ್ ಚೇರ್ಮನ್ ಬಿ.ನಿತ್ಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story