ಉಡುಪಿ ಜಿಲ್ಲಾ ಘಟಕಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಜಿಲ್ಲಾ ಪ್ರಶಸ್ತಿ
ಉಡುಪಿ, ಫೆ.17: ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ರಾಜಭವನದ ಬ್ಯಾಕ್ವೆಂಟ್ ಹಾಲ್ನಲ್ಲಿ ಫೆ.15ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ 2018-19ನೇ ಸಾಲಿನಲ್ಲಿ ಹಮ್ಮಿಕೊಂಡ ನಿರ್ದಿಷ್ಟ ಚಟುವಟಿಕೆಗಳಿಗಾಗಿ ರಾಜ್ಯ ಮಟ್ಟದ ಅತ್ಯುತ್ತಮ ಜಿಲ್ಲಾ ಪ್ರಶಸ್ತಿಯನ್ನು ಉಡುಪಿ ಜಿಲ್ಲಾ ಘಟಕಕ್ಕೆ ಪ್ರಧಾನ ಮಾಡಲಾಯಿತು.
ಪ್ರಶಸ್ತಿಯನ್ನು ರಾಜ್ಯಪಾಲರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ವಜುಬಾಯಿ ವಾಲಾ ಅವರು, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹಾಗೂ ಗೌರವ ಕಾರ್ಯದರ್ಶಿ ಕೆ. ಬಾಲಕೃಷ್ಣ ಶೆಟ್ಟಿ, ಗೌರವ ಖಜಾಂಜಿ ಟಿ. ಚಂದ್ರಶೇಖರ್, ಯುವ ರೆಡ್ ಕ್ರಾಸ್ ಘಟಕದ ನಿರ್ದೇಶಕ ಜಯಾಮ ಆಚಾರ್ಯರಿಗೆ ಹಸ್ತಾಂತರಿಸಿದರು.
Next Story