ಯುವತಿ ನಾಪತ್ತೆ
ಉಡುಪಿ, ಫೆ.17:ತಾಲೂಕಿನ ಶಿವಳ್ಳಿ ಗ್ರಾಮದ ಅಂಬಾಗಿಲು-ಕಕ್ಕುಂಜೆಯ ನಿವಾಸಿ ಸನಾ (21) ಫೆ.11ರಂದು ಬೆಳಗ್ಗೆ ಮಣಿಪಾಲಕ್ಕೆ ಸಂದರ್ಶನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೂ ಮನೆಗೆ ಮರಳದೇ ಕಾಣೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರವಿದ್ದು, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಉರ್ದು, ಹಿಂದಿ, ಇಂಗ್ಲೀಷ್ ಬಾಷೆ ಬಲ್ಲವರಾಗಿ ದ್ದಾರೆ. ಇವರಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story