ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್ ಸಮಿತಿಗೆ ಮಹಿಳಾ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ
ಉಡುಪಿ, ಫೆ.17: ಸಖಿ ಒನ್ಸ್ಟಾಪ್ ಸೆಂಟರ್ನ ಯೋಜನೆಯ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚನೆಯಾಗಿದ್ದು, ಈ ಸಮಿತಿಗೆ ನಾಗರಿಕ ಸೇವಾ ಸಂಸ್ಥೆಗಳ (ಮಹಿಳಾ ಕ್ಷೇತ್ರದಲ್ಲಿ ಅನುಭವವಿರುವ 3 ಮಹಿಳಾ ಸದಸ್ಯರು) ಸದಸ್ಯರುಗಳನ್ನು ನಾಮ ನಿರ್ದೇಶನ ಮಾಡಲು ಮಹಿಳಾ ಕ್ಷೇತ್ರದಲ್ಲಿ ಅನುಭವವಿರುವ ಅರ್ಹ ಅ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅ್ಯರ್ಥಿಗಳು ಸ್ವ-ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 29ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574978ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story