ಉಡುಪಿ ಜಿಪಂ ನೌರರ ಸೌಹಾರ್ದ ಕ್ರೀಡಾಕೂಟ ಉದ್ಘಾಟನೆ
ಉಡುಪಿ, ಫೆ.18: ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಆರ್ಡಿಪಿಆರ್ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಸಂಘಗಳ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸರಕಾರಿ ನೌಕರರ ಸೌಹಾರ್ದ ಕ್ರೀಡಾಕೂಟವನ್ನು ಉಡುಪಿ ಬೀಡಿನಗುಡ್ಡೆ ಮೈದಾನದಲ್ಲಿ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅವರು ಸೋಮವಾರ ಉದ್ಘಾಟಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ರಾವ್ ಮತ್ತಿತರರು ಉಪಸ್ಥಿತರಿದ್ದರು.
Next Story