ತುಳು ಭಾಷೆಗೆ ಮಾನ್ಯತೆ ನೀಡಲು ಮುಖ್ಯಮಂತ್ರಿ, ಸಚಿವರಿಗೆ ಶಾಸಕ ಕಾಮತ್ ಮನವಿ | Vartha Bharati- ವಾರ್ತಾ ಭಾರತಿ

ತುಳು ಭಾಷೆಗೆ ಮಾನ್ಯತೆ ನೀಡಲು ಮುಖ್ಯಮಂತ್ರಿ, ಸಚಿವರಿಗೆ ಶಾಸಕ ಕಾಮತ್ ಮನವಿ

ಮಂಗಳೂರು : ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದರು.

ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವುದು ಹಾಗೂ ರಾಜ್ಯದ ಅಧಿಕೃತ ಭಾಷೆ ಯಾಗಿ ಘೋಷಿಸಬೇಕೆಂಬ ಹೋರಾಟ ಬಹು ಕಾಲದಿಂದ ನಡೆಯುತ್ತಿದೆ. ತುಳು ಭಾಷೆಯ ಕುರಿತು ಬಹಳಷ್ಟು ಪ್ರಚಾರ ಕಾರ್ಯದಲ್ಲಿ ತೊಡಗಿ ರುವ ಶಾಸಕ ಕಾಮತ್ ತುಳುವಿಗೆ ವಿಶೇಷ ಸ್ಥಾನಮಾನ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಯಿಸಿರುವ ಶಾಸಕ ಕಾಮತ್, ಸುಮಾರು 2500 ವರ್ಷಗಳ ಇತಿಹಾಸವಿರುವ ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ರಾಜ್ಯ ಸರಕಾರವು ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವುದು ಅಗತ್ಯ ವಾಗಿದೆ. 1.5 ಕೋಟಿಗಿಂತಲೂ ಹೆಚ್ಚು ತುಳುಭಾಷಿಗರಿದ್ದು ತುಳುವಿಗೆ ತನ್ನದೇ ಆದ ಲಿಪಿಯಿದೆ. ತುಳುಭಾಷೆಯಲ್ಲಿ 14ನೇ ಶತಮಾನಕ್ಕಿಂತಲೂ ಹಿಂದಿನಿಂದಲೇ ಕಾವ್ಯಗಳು ಸೃಷ್ಟಿಯಾಗಿದೆ ಎಂದಿದ್ದಾರೆ.

ತುಳುಲಿಪಿಯಲ್ಲಿ ಸಾಹಿತ್ಯಿಕ ಪ್ರಕಾರಗಳು ರಾಮಾಯಣ, ಮಹಾಭಾರತದಂತಹ ಉದ್ಗ್ರಂಥಗಳು ಪ್ರಾಪ್ತಿಯಾಗಿದೆ. ತುಳು ಲಿಪಿಯ ಸಹಸ್ರಾರು ಶಿಲಾಶಾಸನಗಳು, ತಾಮ್ರ ಪತ್ರಗಳು, ತಾಡೆಯೋಲೆಗಳ ದಾಖಲೆಗಳು ಕರಾವಳಿ ಪ್ರದೇಶದಲ್ಲಿ ಲಭ್ಯವಿದೆ. ನೀಲೇಶ್ವರದಿಂದ ಅಂಕೋಲ, ಮೂಡಣ ಘಟ್ಟ, ಪಡುವಣ ಕಡಲು, ಮೃದು ಮಣ್ಣಿನ ಈ ನೆಲವನ್ನು ತುಳುರಾಜ್ಯ ಎಂದೇ ಶಾಸನಗಳು ನಮಗೆ ಲಭ್ಯವಾಗಿರುವುದು. ಹಾಗಾಗಿ ರಾಜ್ಯದ ಅಧಿಕೃತ ಭಾಷೆಯಾಗಿ ಹಾಗೂ ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಸಕಾಲವಾಗಿದೆ ಎಂದು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ಸಂದರ್ಭ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top