ಫಲಾನುವಿಗಳಿಗೆ ಅಗತ್ಯ ಪರಿಕರ ವಿತರಣೆ
ಉಡುಪಿ, ಫೆ.20: ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮುದರಂಗಡಿ ಚೈತ್ರ ಕುಮಾರಿಗೆ ಎಂಆರ್ ಕಿಟ್ ಹಾಗೂ ಕಳ್ತೂರು ಗ್ರಾಪಂನಲ್ಲಿ ವಿಕಲಚೇತನನರಿಗೆ ಮೀಸಲಿಟ್ಟ ಶೇ.5ರ ಅನುದಾನದಲ್ಲಿ ಕುತ್ಯಾರು ಗ್ರಾಪಂ ಬಳಿಯ ನಿವಾಸಿ ಅಬ್ದುಲ್ ಖಾದರ್ ಇವರಿಗೆ ಸುಮಾರು ರೂ.10,000 ಮೌಲ್ಯದ ಸಲಕರಣೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕಾ ಉಡುಪಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಗೌರವ ಖಜಾಂಚಿ ಟಿ. ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
Next Story