ಉಳ್ಳಾಲ: ರೈಲಿನಡಿಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಉಳ್ಳಾಲ, ಫೆ.28: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸೋಮೇಶ್ವರ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತನನ್ನು ಬೆಳಗಾವಿಯ ಬಿ.ಇ. ಇಂಜಿನಿಯರಿಂಗ್ ವಿದ್ಯಾರ್ಥಿ, ಬೆಳಗಾವಿ ನಿವಾಸಿ ಸಮ್ಮದ್ ರಾಯಗೌಡ(23) ಎಂದು ಗುರುತಿಸಲಾಗಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಸಮ್ಮದ್ ಅವರ ಮೃತದೇಹ ಉಳ್ಳಾಲದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಿರಬಹುದೆಂದು ಶಂಕಿಸಲಾಗಿದೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
Next Story