ನೆಲ್ಯಾಡಿ: ವ್ಯಕ್ತಿಯೋರ್ವ ಆತ್ಮಹತ್ಯೆ
ನೆಲ್ಯಾಡಿ, ಮಾ.30: ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನೆಲ್ಯಾಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿಯ ಕೌಕ್ರಾಡಿ ಗ್ರಾಮದ ಭೂತಲಡ್ಕ ನಿವಾಸಿ ಬಾಬು ಮುಗೇರ(65) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
Next Story