ಕಾಸರಗೋಡು : ಇಂದು 17 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢ
ನೂರು ದಾಟಿದ ಸೋಂಕಿತರ ಸಂಖ್ಯೆ
ಕಾಸರಗೋಡು : ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ನೂರು ದಾಟಿದ್ದು, ಇಂದು 17 ಮಂದಿಯಲ್ಲಿ ಸೋಂಕು ದೃಢ ಪಡುವುದರೊಂದಿಗೆ ಸೋಂಕಿತರ ಸಂಖ್ಯೆ 106 ಕ್ಕೇರಿದೆ.
ರಾಜ್ಯದಲ್ಲಿ ಇಂದು 32 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 17 ಮಂದಿ ವಿದೇಶದಿಂದ ಬಂದವರಾಗಿದ್ದು, ಉಳಿದವರು ಸೋಂಕಿತರ ಸಂಪರ್ಕದಿಂದ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕಣ್ಣೂರು 11, ವಯನಾಡು, ಇಡುಕ್ಕಿ ಜಿಲ್ಲೆಯ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಮಹಾರಾಷ್ಟ್ರ ಬಳಿಕ ಕೇರಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
Next Story