ಕುಂದಾಪುರದ ಮಾಜಿ ಶಾಸಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ
ಕುಂದಾಪುರ, ಎ.28: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್(92) ಮಂಗಳವಾರ ಮಧ್ಯಾಹ್ನ ಕುಂದಾಪುರ ಚರ್ಚ್ ರಸ್ತೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಪ್ರಜಾ ಸೋಶಿಯಲಿಸ್ಟ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ್ದ ಅವರು ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಅವರು, ಕುಂದಾಪುರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಯಾಗಿದ್ದರು. ಅದೇ ರೀತಿ ನಂತರ ವಿಧಾನ ಪರಿಷತ್ ಸದಸ್ಯೆಯಾಗಿಯೂ ಆಗಿದ್ದರು.
ಮೃತರು ಮೂವರು ಪುತ್ರಿಯರು, ಮೂವರು ಪುತ್ರರ ಸಹಿತ ಅಪಾರ ಬಂಧಮಿತ್ರರನ್ನು ಅಗಲಿದ್ದಾರೆ
Next Story