ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಬೈಂದೂರು, ಮೇ 3: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮೇ 2ರಂದು ಸಂಜೆ 5ಗಂಟೆ ಸುಮಾರಿಗೆ ತಗ್ಗರ್ಸೆ ಗ್ರಾಮದ ಮಾವಡ ಎಂಬಲ್ಲಿ ನಡೆದಿದೆ.
ಮೃತರನ್ನು ಸನಲು ಪಿ.ಟಿ. ಎಂದು ಗುರುತಿಸಲಾಗಿದೆ. ಗಂಗನಾಡು ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸವಾರ ಸೈಕಲ್ ಸಮೇತ ರಸ್ತೆಗೆ ಬಿದ್ದರು. ಗಂಭೀರವಾಗಿ ಗಾಯಗೊಂಡು ಸನಲು ಪಿ.ಟಿ. ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story