ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಶಂಕರನಾರಾಯಣ, ಮೇ 16: ಸಿದ್ದಾಪುರ ಗ್ರಾಮದ ಟಾಕೀಸ್ ರಸ್ತೆಯ ಬೋಜ ಶೆಟ್ಟಿ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಅರುಣ್ ಶೆಟ್ಟಿ (49) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮೇ15ರಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಹಳೆ ಕಾಲ್ತೋಡು ನಿವಾಸಿ ಗೋಪಾಲ ಪೂಜಾರಿ(32) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 15ರಂದು ಅಪರಾಹ್ನ ವೇಳೆ ತಾನು ವಾಸವಾಗಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story