ಪದವೀಧರ ಮತ್ತು ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐವನ್ ನೇಮಕ
ಮಂಗಳೂರು, ಮೇ 27: ಕರ್ನಾಟಕ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ (ಉಸ್ತುವಾರಿ) ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇಮಕರಾಗಿದ್ದಾರೆ.
ರಾಜ್ಯದ 4 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಕರ್ನಾಟಕ ವಾಯುವ್ಯ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಬೆಳಗಾವಿ ಜಿಲ್ಲೆಗೆ ಐವನ್ ಡಿಸೋಜಾರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ವೀಕ್ಷಕರನ್ನಾಗಿ ನೇಮಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story