ಲೈಂಗಿಕ ದೌರ್ಜನ್ಯ ತಡೆಗೆ ದೂರು ಸಮಿತಿ ರಚನೆ
ಉಡುಪಿ, ಮೇ 27: ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ಉದ್ಯೋಗಿಗಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಸ್ಥಳೀಯ ದೂರು ಸಮಿತಿಯನ್ನು ರಚಿಸಲಾಗಿದೆ.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ವ್ಯಾಪ್ತಿಗೆ ಒಳಪಡುವ ಖಾಸಗಿ/ಸರಕಾರಿ ಕಚೇರಿಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ಹಾಗೂ ಸದರಿ ಸಮಿತಿಗಳ ಸಭಾ ನಡವಳಿ ಇತ್ಯಾದಿ ಕಾರ್ಯ ನಿರ್ವಹಣೆ ಕುರಿತ ವಾರ್ಷಿಕ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story