ಉಡುಪಿ: ಶನಿವಾರವೂ ಮೂರು ಪಾಸಿಟಿವ್ ಪ್ರಕರಣ ಪತ್ತೆ | Vartha Bharati- ವಾರ್ತಾ ಭಾರತಿ
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆ

ಉಡುಪಿ: ಶನಿವಾರವೂ ಮೂರು ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ, ಮೇ 23: ನೋವೆಲ್ ಕೊರೋನ ವೈರಸ್‌ಗೆ ಸಂಬಂಧಿಸಿದಂತೆ ಶನಿವಾರ ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂರು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 34 ವರ್ಷದ ಮಹಿಳೆ ಹಾಗೂ 40 ಮತ್ತು 49 ವರ್ಷದ ಪುರುಷರು ಕೊರೋನ ಸೋಂಕನ್ನು ಹೊಂದಿರುವುದು ಅವರ ಗಂಟಲು ದ್ರವಗಳ ಪರೀಕ್ಷೆಗಳಲ್ಲಿ ಸಾಬೀತಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕಂಡುಬಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ 53ಕ್ಕೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 49ಕ್ಕೇರಿದೆ. ಜಿಲ್ಲೆಯಲ್ಲಿ ಮಾ.26 ಮತ್ತು 29ರಂದು ಪತ್ತೆಯಾದ ಮೊದಲ ಮೂರು ಪ್ರಕರಣಗಳಲ್ಲಿ ಸೋಂಕಿತ ವ್ಯಕ್ತಿಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮುಂಬೈಯಿಂದ ಬಂದ ಒಬ್ಬರು ಮೇ 14ರಂದು ಹೃದಯಾಘಾತದಿಂದ ಮೃತಪಟ್ಟಿದ್ದು ಅವರಲ್ಲಿ ಸೋಂಕು ಪತ್ತೆಯಾಗಿತ್ತು.

ಇಂದು ಪಾಸಿಟಿವ್ ಬಂದ ಮೂವರಲ್ಲಿ 34ರ ಹರೆಯದ ಮಹಿಳೆ (ಪಿ 1931) ಬೈಂದೂರು ತಾಲೂಕಿನ ನಾಡದವರು. ಮೇ 9ರಂದು ಮುಂಬೈಯಿಂದ ಊರಿಗೆ ಬಂದ ಇವರು ಕುಂದಾಪುರದ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಅವರೊಂದಿಗೆ ಸಹ ಪ್ರಯಾಣಿಕರಾಗಿ ಬಂದವರು, ಕ್ವಾರಂಟೈನ್‌ನಲ್ಲಿದ್ದವರು ಸೇರಿದಂತೆ 11 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ.

ಉಳಿದಿಬ್ಬರು 40 ಮತ್ತು 49 ವರ್ಷ ಪ್ರಾಯದ ಪುರುಷರಿಬ್ಬರೂ ಬೈಂದೂರಿನವರಾಗಿದ್ದು, ಮುಂಬೈಯಿಂದ ಬಂದವರು. ಅವರು ಕುಂದಾಪುರದಲ್ಲಿ ಕ್ವಾರಂಟೈನ್‌ನಲ್ಲಿದ್ದರು ಎಂದು ತಿಳಿದುಬಂದಿದೆ. ಇವರಿಬ್ಬರ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಶನಿವಾರ 856 ಸ್ಯಾಂಪಲ್ ಪರೀಕ್ಷೆಗೆ: ಜಿಲ್ಲಾ ಆರೋಗ್ಯ ಇಲಾಖೆ ಶನಿವಾರ ಕೊರೋನ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರುವ ಒಟ್ಟು 856 ವ್ಯಕ್ತಿಗಳ ಗಂಟಲು ದ್ರವ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಡಾ.ಸೂಡ ಹೇಳಿದರು.

ಶನಿವಾರ ಒಂದೇ ದಿನದಲ್ಲಿ 823 ಸ್ಯಾಂಪಲ್‌ಗಳನ್ನು ಕೊರೋನ ಹಾಟ್‌ಸ್ಪಾಟ್ ಎನಿಸಿರುವ ಹೊರರಾಜ್ಯಗಳಿಂದ ಬಂದವರಿಂದ ಪರೀಕ್ಷೆಗಾಗಿ ಪಡೆಯಲಾಗಿದೆ. ಉಳಿದಂತೆ 18 ಮಂದಿ ಸೋಂಕಿತರ ಸಂಪರ್ಕಕ್ಕೆ ಬಂದವರು, ಐವರು ತೀವ್ರ ಉಸಿರಾಟ ತೊಂದರೆಯವರು, 10 ಮಂದಿ ಶೀತಜ್ವರದಿಂದ ಬಳಲುವವರ ಸ್ಯಾಂಪಲ್‌ಗು ಸೇರಿವೆ ಎಂದು ಡಿಎಚ್‌ಓ ತಿಳಿಸಿದರು.

3 ಪಾಸಿಟಿವ್, 339 ನೆಗೆಟಿವ್: ನೋವೆಲ್ ಕೊರೋನ ವೈರಸ್ (ಕೋವಿಡ್ -19) ಸೋಂಕಿನ ಪರೀಕ್ಷೆಗಾಗಿ ಕಳುಹಿಸಿದ ಶಂಕಿತರ ಗಂಟಲು ದ್ರವದ ಮಾದರಿಗಳಲ್ಲಿ ಶನಿವಾರ ಮತ್ತೆ ಮೂರು ಪಾಸಿಟಿವ್ ಫಲಿತಾಂಶವನ್ನು ನೀಡಿದ್ದರೆ, 339 ವರದಿಗಳು ನೆಗೆಟಿವ್ ಆಗಿವೆ. ಇಂದು ಸಂಜೆಯವರೆಗೆ ಒಟ್ಟು 5703 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿದೆ. ಇವುಗಳಲ್ಲಿ 2727 ನೆಗೆಟಿವ್ ಆಗಿವೆ. ಒಟ್ಟಾರೆಯಾಗಿ ಈವರೆಗೆ ಉಡುಪಿಯಲ್ಲಿ 53 ವರದಿಗಳು ಪಾಸಿಟಿವ್ ಆಗಿ ಬಂದಿವೆ. ದಿನದ ಕೊನೆಗೆ ಇನ್ನೂ 2925 ಸ್ಯಾಂಪಲ್‌ಗಳ ವರದಿಯನ್ನು ಕಾಯಲಾಗುತ್ತಿದೆ ಎಂದರು.

ಶಂಕಿತ ನೋವೆಲ್ ಕೊರೋನ ಸೋಂಕಿನ ಪರೀಕ್ಷೆಗಾಗಿ ಇಂದು 21 ಮಂದಿ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿಗೆ ದಾಖಲಾಗಿದ್ದಾರೆ. ಇವರಲ್ಲಿ 10 ಮಂದಿ ಪುರುಷ ಹಾಗೂ 11 ಮಂದಿ ಮಹಿಳೆಯರಿದ್ದಾರೆ. ಆರು ಮಂದಿ ಕೊರೋನ ಶಂಕಿತರು, ಐವರು ತೀವ್ರತರದ ಉಸಿರಾಟ ತೊಂದರೆ ಹಾಗೂ ಹತ್ತು ಮಂದಿ ಶೀತಜ್ವರದ ಬಾಧೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿನಿಂದ ಇಂದು 11 ಮಂದಿ ಬಿಡುಗಡೆಗೊಂಡಿದ್ದು, 106 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇದುವರೆಗೆ 583 ಮಂದಿ ಚಿಕಿತ್ಸೆ ಪಡೆದು ಐಸೋಲೇಶನ್ ವಾರ್ಡಿನಿಂದ ಬಿಡುಗಡೆಗೊಂಡಿದ್ದಾರೆ ಎಂದವರು ವಿವರಿಸಿದರು.

ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ 33 ಮಂದಿ ಇಂದು ಹೊಸದಾಗಿ ನೋಂದಣಿಗೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4840 ಮಂದಿಯನ್ನು ಕೊರೋನ ತಪಾಸಣೆಗಾಗಿ ನೋಂದಣಿ ಮಾಡಿ ಕೊಳ್ಳಲಾಗಿದೆ. ಇವರಲ್ಲಿ 3489(ಇಂದು 81) ಮಂದಿ 28 ದಿನಗಳ ನಿಗಾ ವನ್ನೂ, 4301 (69) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಲೂ 351 ಮಂದಿ ಹೋಮ್ ಕ್ವಾರಂಟೈನ್‌ನಲ್ಲೂ, 8010 ಮಂದಿ ವಿವಿಧ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಹಾಗೂ 82 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top