ಕಾಪು: ಉದ್ಯಾವರ ಸೇತುವೆಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್; ಹಲವು ಪ್ರಯಾಣಿಕರಿಗೆ ಗಾಯ
ಕಾಪು, ಮೇ 29: ಕೆಎಸ್ಸಾರ್ಟಿಸಿ ಬಸ್ಸೊಂದು ಸೇತುವೆಗೆ ಢಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಉದ್ಯಾವರ ಸೇತುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ. ಇದರಿಂದ ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.
ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದೂರಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ