ಪಣಂಬೂರು ಬಳಿ ಟ್ರಕ್-ಬೈಕ್ ಮಧ್ಯೆ ಅಪಘಾತ: ಮೂವರಿಗೆ ಗಾಯ
ಪಣಂಬೂರು, ಮೇ 29: ಪಣಂಬೂರು ಬೀಚ್ ಬಳಿ ನಿಂತಿದ್ದ ಟ್ರಕ್ವೊಂದಕ್ಕೆ ಬೈಕ್ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಇದರಿಂದ ಬೈಕ್ನಲ್ಲಿದ್ದ ಮೂವರು ಯುವಕರು ಗಾಯಗೊಂಡಿದ್ದಾರೆ.
ಪಣಂಬೂರು ಬೀಚ್ ರಸ್ತೆಯಲ್ಲಿ ಟ್ರಕ್ವೊಂದು ನಿಂತಿದ್ದು, ಈ ರಸ್ತೆಯಾಗಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿಕೊಂಡು ಬಂದ ಬೈಕ್ ಸ್ಕಿಡ್ಡಾಗಿ ಟ್ರಕ್ಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಬೈಕ್ನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದರು. ಇವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story