ಬಾಲಕನಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಕಾರ್ಕಳ, ಜೂ.2: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ವ್ಯಕ್ತಿಯೊಬ್ಬರನ್ನು ಪೊಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
ಸಚ್ಚರಿಪೇಟೆಯ ಇಬ್ರಾಹಿಂ(52) ಬಂಧಿತ ಆರೋಪಿ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ ಸಂತ್ರಸ್ತ ಬಾಲಕನು ಪೋಷಕರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅದರಂತೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಮತ್ತು ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕರಾದ ನಾಸಿರ್ ಹುಸೈನ್ ಮತ್ತು ದಿಲೀಪ್ ನೇತೃತ್ವದ ತಂಡ ಕಾರ್ಯಾ ಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಆಪ್ತಸಮಾಲೋಚನೆ ನಡೆಸಿ ಬಾಲಕನಿಗೆ ಮತ್ತು ಪೋಷಕರಿಗೆ ಆತ್ಮ ಸ್ಥೈರ್ಯ ನೀಡುವ ಮೂಲಕ ಶಿಕ್ಷಣ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ.
Next Story