ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಡಯಾಲಿಸಿಸ್: ಸಚಿವ ಕೋಟ ಮನವಿ
ಮಂಗಳೂರು, ಜೂ.3: ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರವನ್ನು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವೈದ್ಯಕೀಯ ಸಚಿವರಿಗೆ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಮಾಡಬೇಕು ಎನ್ನುವ ಬಗ್ಗೆ ಸಾರ್ವಜನಿಕರ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ತ್ವರಿತ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಕೋವಿಡ್ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕು. ಅದೇ ರೀತಿ ಲ್ಯಾಬ್ ಟೆಕ್ನಿಷನ್ಗಳನ್ನು ಕೂಡ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.
Next Story