ಶಕ್ತಿ ವಸತಿ ಶಾಲೆಯಿಂದ ಆನ್ಲೈನ್ ಚಿತ್ರಕಲಾ ಸ್ಪರ್ಧೆ
ಮಂಗಳೂರು, ಜೂ.5: ಶಕ್ತಿನಗರದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಪರಿಸರ ದಿನಾಚರಣೆಯ ಅಂಗವಾಗಿ ಆನ್ಲೈನ್ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸ್ಪರ್ಧೆಯು ಎರಡು ವಿಭಾಗಗಳಲ್ಲಿ ನಡೆದಿದ್ದು 1-5 ತರಗತಿಯ ವಿದ್ಯಾರ್ಥಿಗಳಿಗೆ ‘ಲಾಕ್ಡೌನ್ನ ಸದ್ಬಳಕೆ’ ಎಂಬ ವಿಷಯ ಮತ್ತು 6-9ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಲಾಕ್ಡೌನ್ನ ಮೊದಲು ಮತ್ತು ನಂತರ’ ಎಂಬ ವಿಷಯದ ಮೇಲೆ ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಬಹಳ ಕಲಾತ್ಮಕವಾಗಿ ತಮ್ಮ ಚಿಂತನೆಯನ್ನು ಚಿತ್ರದ ಮೂಲಕ ಮೂಡಿಸಿದ್ದಾರೆ.
ಕಳೆದ ಒಂದು ತಿಂಗಳಿಂದ ಆನ್ಲೈನ್ ತರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ 1-9ನೇ ತರಗತಿಯ ವಿದ್ಯಾರ್ಥಿಗಳು ಈ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲೂ ಅಷ್ಟೇ ಉತ್ಸಾಹದಿಂದ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮದ ಆಯೋಜನೆಯನ್ನು ಚಿತ್ರಕಲಾ ಅಧ್ಯಾಪಕ ಪೂರ್ಣೇಶ್ ಮಾಡಿದರು ಎಂದು ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ತಿಳಿಸಿದ್ದಾರೆ.
Next Story