ಸುರತ್ಕಲ್: ಡಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ
ಮಂಗಳೂರು, ಜೂ.28: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ಯುವ ಕಾಂಗ್ರೆಸ್ ಸುರತ್ಕಲ್ ವಿಧಾನಸಭಾ ಸಮಿತಿಯ ಸಭೆಯು ಜಿಲ್ಲಾಧ್ಯಕ್ಷ ಮಿಥುನ್ ರೈಯ ನೇತೃತ್ವದಲ್ಲಿ ರವಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಯುವ ಕಾಂಗ್ರೆಸ್ ಮಂಗಳೂರು ಉತ್ತರ ವಿಧಾನಸಭಾ ಸಮಿತಿಯ ಅಧ್ಯಕ್ಷ ಗಿರೀಶ್ ಆಳ್ವ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ಸೇವಾದಳದ ಜಿಲ್ಲಾ ಮುಖ್ಯಸ್ಥ ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.
Next Story