ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ
ಮಂಗಳೂರು, ಜೂ.30: ದಕ್ಷಿಣ ಕನ್ನಡ ಜಿಲ್ಲೆಯ ಏಳು ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 66 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವೆಬ್ಸೈಟ್ ವಿಳಾಸ: www.anganwadirecruit.kar.nic.in ಆಗಿದೆ. ಜು.7ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜು.30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು ಸಂಪರ್ಕಿ ಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story