ದ.ಕ. ಜಿಲ್ಲೆ : ಕೊರೋನ ಸೋಂಕಿಗೆ ಇಬ್ಬರು ಬಲಿ
ಸಾಂದರ್ಭಿಕ ಚಿತ್ರ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೋನದಿಂದ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಬೆಂಗ್ರೆ ನಿವಾಸಿ, ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ 51 ವರ್ಷದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೋರ್ವ ಯುವಕನನ್ನು 31 ವರ್ಷದ ಭಟ್ಕಳ ನಿವಾಸಿ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Next Story