ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರ ಕಾರು ಅಪಘಾತ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರ ಕಾರು ಮೂಡಬಿದ್ರೆಯ ಮಿಜಾರು ಸಮೀಪ ಅಪಘಾತಕ್ಕೀಡಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರು ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಂಪೌಂಡ್ ಗೋಡೆಗೆ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು , ಸುದರ್ಶನ್ ಮೂಡಬಿದ್ರೆ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Next Story