ಎಸೆಸೆಲ್ಸಿ ಪರೀಕ್ಷೆ : ವಿಶೇಷ ಕೊಠಡಿಯಲ್ಲಿ 46 ವಿದ್ಯಾರ್ಥಿಗಳಿಂದ ಪರೀಕ್ಷೆ
ಮಂಗಳೂರು, ಜು.1: ಬುಧವಾರ ನಡೆದ ಎಸೆಸೆಲ್ಸಿಯ ಸಮಾಜ ವಿಜ್ಞಾನ ಪರೀಕ್ಷೆಗೆ 285 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.
ಸಮಾಜ ವಿಜ್ಞಾನ ಪರೀಕ್ಷೆಗೆ 28,161 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ಒಟ್ಟು 27,876 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 285 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಹಾಜರಾದವರಲ್ಲಿ ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ 46, ನೆರೆ ರಾಜ್ಯಗಳಿಂದ ಒಟ್ಟು 367 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story