ಖಾಸಗಿ ಆಸ್ಪತ್ರೆಗಳ ಗಂಟಲ ದ್ರವ ಪರೀಕ್ಷೆಯ ವರದಿಗಳಲ್ಲಿ ಎಡವಟ್ಟು ಆರೋಪ: ಸೂಕ್ತ ತನಿಖೆ ನಡೆಸಲು ದ.ಕ ಡಿಸಿಗೆ ಮನವಿ | Vartha Bharati- ವಾರ್ತಾ ಭಾರತಿ

ಖಾಸಗಿ ಆಸ್ಪತ್ರೆಗಳ ಗಂಟಲ ದ್ರವ ಪರೀಕ್ಷೆಯ ವರದಿಗಳಲ್ಲಿ ಎಡವಟ್ಟು ಆರೋಪ: ಸೂಕ್ತ ತನಿಖೆ ನಡೆಸಲು ದ.ಕ ಡಿಸಿಗೆ ಮನವಿ

ಸಿಂಧೂ ಬಿ. ರೂಪೇಶ್

ಮಂಗಳೂರು, ಜು.4: ಖಾಸಗಿ ಆಸ್ಪತ್ರೆಗಳು ನಡೆಸುವ ಕೋವಿಡ್-19 ಗಂಟಲ ದ್ರವ ಪರೀಕ್ಷಾ ಕ್ರಮ ಮತ್ತು ನೀಡುವ ವರದಿಗಳಲ್ಲಿ ಎಡವಟ್ಟುಗಳಾಗುತ್ತಿದ್ದು, ಜನರ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ. ಜೊತೆಗೆ ಸಮಾಜದಲ್ಲಿ ಆತಂಕ, ಅನುಮಾನಗಳಿಗೆ ಎಡೆ ಮಾಡುತ್ತಿವೆ. ಈ ಕುರಿತಂತೆ ಪರಿಶೀಲನೆ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಉಮರ್ ಯು.ಹೆಚ್. ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ರನ್ನು ಒತ್ತಾಯಿಸಿದ್ದಾರೆ.

ಕೋವಿಡ್-19 ವಿಪತ್ತು ನಿರ್ವಹಣಾ ತಂಡಕ್ಕೆ ಸಮರ್ಥ ನಾಯಕತ್ವ ನೀಡುತ್ತಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಡಳಿತದ ತಂಡದಲ್ಲಿರುವ ಅಧಿಕಾರಿಗಳು, ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಎಲ್ಲ ಸಿಬ್ಬಂದಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿನ ಪ್ರಯೋಗಾಲಯದ ಒತ್ತಡ ಹೆಚ್ಚಾದಾಗ, ಅತ್ಯಂತ ಕಡಿಮೆ (ರೂ. 650) ದರದಲ್ಲಿ ವಿದೇಶಗಳಿಂದ ಬರುವ ನಮ್ಮ ಜಿಲ್ಲೆಯ ಜನರ ಗಂಟಲ ದ್ರವ ಪರೀಕ್ಷೆ ನಡೆಸಲು ಆಯ್ದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ನೀಡಿರುವ ಜಿಲ್ಲಾಡಳಿತದ ಕ್ರಮ ಸ್ವಾಗತಾರ್ಹ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಗಳು ನಡೆಸುತ್ತಿರುವ, ಹೋಟೆಲ್ ಕ್ವಾರಂಟೈನ್ ನಲ್ಲಿರುವವರ ಗಂಟಲ ದ್ರವ ಪರೀಕ್ಷೆಯಲ್ಲಿ ಎಡವಟ್ಟುಗಳಾಗುತ್ತಿದೆ ಎಂದು ಉಮರ್ ಯು.ಹೆಚ್ ಆರೋಪಿಸಿದ್ದಾರೆ. 

ವಿದೇಶದಿಂದ ಬಂದ ಮರುದಿನವೇ ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳು ಮತ್ತಿತರರ ಗಂಟಲ ದ್ರವ ಪಡೆಯಲು ಆಸ್ಪತ್ರೆಯ ಪ್ರಯೋಗಾಲದ ಸಿಬ್ಬಂದಿಗಳು ಹೋಟೆಲ್ ಗಳಿಗೆ ಭೇಟಿ ನೀಡಬೇಕೆಂಬ ನಿಯಮವಿದೆ. ಆದರೆ ಇದರ ಕಟ್ಟು ನಿಟ್ಟಿನ ಪಾಲನೆಯಾಗುತ್ತಿಲ್ಲ. 2-3 ದಿನಗಳ ಬಳಿಕವೇ ಬರುತ್ತಿದ್ದಾರೆ. ಗಂಟಲ ದ್ರವ ಪಡೆದ ಬಳಿಕ ಪ್ರತಿಯೊಬ್ಬರಿಗೂ ಪ್ರಯೋಗಾಲಯದಿಂದ ಕಳುಹಿಸುವ ವರದಿಯ ಪ್ರಾಥಮಿಕ ಚೀಟಿಯಲ್ಲಿ ಎಡವಟ್ಟಾಗುತ್ತಿದೆ. ರೋಗ ಲಕ್ಷಣಗಳಿಲ್ಲದವರಿಗೂ ‘ರೋಗ ಲಕ್ಷಣಗಳಿರುವ ವಿದೇಶಿ ಪ್ರಯಾಣಿಕ’ ಎಂದು ನಮೂದಿಸಲಾಗುತ್ತಿದೆ. ಅಂತಿಮ ವರದಿ ಬರುವುದೂ ವಿಳಂಬವಾಗುತ್ತಿದೆ. ಎರಡರಿಂದ ನಾಲ್ಕುದಿನಗಳ ಕಾಲ ವರದಿಗೆ ಕಾಯಬೇಕಾದ ಅನಿವಾರ್ಯತೆ ಹೋಟೆಲ್ ಕ್ವಾರಂಟೈನ್ ನಲ್ಲಿರುವವರಿಗಿದೆ.

ಮೊದಲಿಗೆ ನೆಗೆಟಿವ್ ವರದಿ ನೀಡಿ, ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗಿರುವ ಕೆಲವು ಮಂದಿಗೆ ಎರಡು ದಿನಗಳ ಬಳಿಕ ನಿಮ್ಮ ವರದಿ ಪಾಸಿಟಿವ್ ಬಂದಿದೆ, ಆಂಬುಲೆನ್ಸ್ ಕಳುಹಿಸುತ್ತೇವೆ, ಆಸ್ಪತ್ರೆಗೆ ಹೊರಡಲು ರೆಡಿಯಾಗಿ ಎಂಬ ಕರೆಗಳು ಬರುತ್ತಿರುವ ಘಟನೆಗಳೂ ನಡೆಯುತ್ತಿವೆ. ಅವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಸಿಬ್ಬಂದಿಗಳ ಕೊರತೆಯ ಕಾರಣದಿಂದಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿರುವ ಗಂಟಲ ದ್ರವ ಪರೀಕ್ಷೆಗಳಲ್ಲಿ ಸಣ್ಣಪುಟ್ಟ ಲೋಪಗಳು ನಡೆಯುತ್ತಿರುವುದು ನಿಜ. ಆದರೆ ಖಾಸಗಿ ಆಸ್ಪತ್ರೆಗಳ ಈ ನಡೆ ಸಹಿಸಲಸಾಧ್ಯ ಎಂದು ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top