ಲಾಕ್ಡೌನ್ನಲ್ಲಿ ಬದಲಾವಣೆ ಇಲ್ಲ: ದ.ಕ. ಜಿಲ್ಲಾಧಿಕಾರಿ
ಮಂಗಳೂರು, ಜು.6: ದ.ಕ.ಜಿಲ್ಲೆಯಲ್ಲಿ ಲಾಕ್ಡೌನ್ ಎಂದಿನಂತೆ ಪ್ರತೀ ದಿನ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೆ ಮತ್ತು ಮುಂದಿನ ಆದೇಶದವರೆಗೆ ಪ್ರತೀ ರವಿವಾರ ಇಡೀ ದಿನ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದ.ಕ.ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಮತ್ತೆ ಲಾಕ್ಡೌನ್ ಆಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳು ಮತ್ತು ಆ ಬಗ್ಗೆ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ ಡಿಸಿ ಈ ಸ್ಪಷ್ಟಣೆ ನೀಡಿದ್ದಾರೆ.
ಈ ಮಧ್ಯೆ ಜಿಲ್ಲೆಯಲ್ಲಿ ಕೆಲವು ದಿನಗಳ ಕಾಲ ಹಲವು ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ಬಂದ್ ಆಗಲಿದೆ ಎಂಬ ಸಂದೇಶವೂ ಹರಿದಾಡುತ್ತಿದೆ. ಆದರೆ ಸಂಘಟನೆಗಳ ಅಧಿಕೃತತೆಯ ಬಗ್ಗೆ ಸ್ಪಷ್ಟತೆ ಇಲ್ಲ.
Next Story