ಮಂಗಳೂರು: ಎಸೆಸೆಲ್ಸಿ ಮೌಲ್ಯಮಾಪನ; ನಿಷೇಧಾಜ್ಞೆ
ಮಂಗಳೂರು, ಜು.8: ಎಸೆಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸುಸೂತ್ರ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜು.13ರಿಂದ ಜು.20ರವರೆಗೆ ಪರೀಕ್ಷಾ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಮೌಲ್ಯಮಾಪನ ನಡೆಯುವ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಂತೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Next Story