ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ
ಉಡುಪಿ, ಜು.15: ಬುಧವಾರದಿಂದ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ಹಾಗೂ ರಾಜ್ಯ ಹವಾಮಾನ ಕೇಂದ್ರ ನೀಡಿವೆ.
ಕರಾವಳಿಯುದ್ದಕ್ಕೂ ಜು.20ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳಲಿದೆ. ದಿನದಲ್ಲಿ 65ರಿಂದ 115ಮಿ.ಮೀ.ನಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.
ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 10ಮಿ.ಮೀ. ಮಳೆಯಾಗಿದೆ. ಉಡುಪಿಯಲ್ಲಿ 9ಮಿ.ಮೀ., ಕುಂದಾಪುರದಲ್ಲಿ 13 ಹಾಗೂ ಕಾರ್ಕಳದಲ್ಲಿ 10ಮಿ.ಮೀ. ಮಳೆಯಾದ ಬಗ್ಗೆ ವರದಿಗಳು ಬಂದಿವೆ.
Next Story