ಪ.ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಉಡುಪಿ, ಜು.16: ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ನೀಡುವ ಯೋಜನೆಯನ್ನು ಸಮಾಜಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.
2020-21ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇವರು ಮುಂದಿನ ನವೆಂಬರ್31ರವರೆಗೆ ಇಲಾಖೆಯ ವೆಬ್ಸೈಟ್-www.sw.kar.nic.in-ನಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿತ ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
Next Story