ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರೋಪಿಗೆ ಜಾಮೀನು
ಮೂಡುಬಿದಿರೆ, ಜು.20: ಮೂಡುಬಿದಿರೆ ಠಾಣಾ ವ್ಯಾಪ್ತಿಯ ಕಡಂದಲೆ ಎಂಬಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾಗ ಕಡಂದಲೆಯ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಹಿತ ಚಾಲಕನನ್ನು ಬಂಧಿಸಿದ್ದರು. ಆದರೆ ಆರೋಪಿ ತೌಸೀಫ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇದೀಗ ಆರೋಪಿಗೆ ಮೂಡುಬಿದಿರೆ ನ್ಯಾಯಾಲಯವು ಷರತ್ತು ಬದ್ದ ಜಾಮೀನು ನೀಡಿದೆ.
ಆರೋಪಿ ಪರ ವಕೀಲ ಎನ್.ಜಿ. ಇರ್ಷಾದ್ ವಾದ ಮಾಡಿದ್ದರು.
Next Story