ಸುಳ್ಯ: ಕೊರೋನ ಸೋಂಕಿತ ಮಹಿಳೆ ಮೃತ್ಯು
ಸುಳ್ಯ,ಜು24: ಸುಳ್ಯದ ಕಲ್ಲುಮುಟ್ಲು ನಿವಾಸಿಯಾಗಿದ್ದ 61 ವರ್ಷದ ಮಹಿಳೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಸೌಖ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಗುರುವಾರ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದರೊಂದಿಗೆ ಕೊರೋನ ಸೋಂಕಿತರಾಗಿ ಸುಳ್ಯ ತಾಲೂಕಿನಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೇರಿದೆ.
Next Story