ಉಡುಪಿ ಜಿಲ್ಲೆಯಲ್ಲಿ ರವಿವಾರ 182 ಮಂದಿಗೆ ಕೊರೋನ ಸೋಂಕು ದೃಢ | Vartha Bharati- ವಾರ್ತಾ ಭಾರತಿ

ಉಡುಪಿ ಜಿಲ್ಲೆಯಲ್ಲಿ ರವಿವಾರ 182 ಮಂದಿಗೆ ಕೊರೋನ ಸೋಂಕು ದೃಢ

ಉಡುಪಿ, ಆ.2: ಜಿಲ್ಲೆಯಲ್ಲಿ ರವಿವಾರ ಒಟ್ಟು 182 ಮಂದಿಯಲ್ಲಿ ಕೋವಿಡ್ -19 ಸೋಂಕು ದೃಢಪಟ್ಟಿದೆ. ಆದರೆ ದಿನದಲ್ಲಿ 625 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 182 ಮಂದಿಯಲ್ಲಿ ಉಡುಪಿ ತಾಲೂಕಿನ 75 ಮಂದಿ, ಕುಂದಾಪುರ ತಾಲೂಕಿನ 55 ಹಾಗೂ ಕಾರ್ಕಳ ತಾಲೂಕಿನ 51 ಮಂದಿ ಸೇರಿದ್ದಾರೆ. ಇನ್ನೊಬ್ಬರು ಹೊರಜಿಲ್ಲೆಯವರು. 107 ಮಂದಿ ಪುರುಷರು, 75 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 182 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 4674ಕ್ಕೇರಿದೆ ಎಂದರು.

50 ಮಂದಿ ಗುಣಮುಖ: ಜಿಲ್ಲೆಯಲ್ಲಿ ರವಿವಾರ ಒಟ್ಟು 50 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖ ರಾಗಿ ಬಿಡುಗಡೆಗೊಂಡವರ ಸಂಖ್ಯೆ 2696ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1943 ಮಂದಿ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಬಂದರೂ, ರೋಗದ ಗುಣಲಕ್ಷಣಗಳಿಲ್ಲದ 779 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದೂ ಡಾ.ಸೂಡ ತಿಳಿಸಿದರು.

977 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ರವಿವಾರ 977 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 696 ಮಂದಿ, ಕೋವಿಡ್ ಸಂಪರ್ಕಿತರು 231 ಮಂದಿ ಇದ್ದರೆ, ಉಸಿರಾಟ ತೊಂದರೆಯ ಇಬ್ಬರು, ಶೀತಜ್ವರದಿಂದ ಬಳಲುವ 35 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 13 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 977 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 33,378ಕ್ಕೇರಿದೆ. ಇವುಗಳಲ್ಲಿ ಈವರೆಗೆ 28,088 ನೆಗೆಟಿವ್, 4674 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 40 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 616 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ರವಿವಾರ 29 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ 5 ಮಂದಿ ಕೋವಿಡ್ ಶಂಕಿತರು, 8 ಮಂದಿ ಉಸಿರಾಟ ತೊಂದರೆಯವರು ಹಾಗೂ 16 ಮಂದಿ ಶೀತಜ್ವರದಿಂದ ಬಲು ವವರು ಸೇರಿದ್ದಾರೆ ಎಂದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗಳಿಂದ ಇಂದು 10 ಮಂದಿ ಬಿಡುಗಡೆಗೊಂಡಿದ್ದು, 325 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಡೆಯು ತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 59 ಮಂದಿ ಸೇರಿದಂತೆ ಒಟ್ಟು 8139 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1267 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ರವಿವಾರ ಸೋಂಕಿತ ಇಬ್ಬರ ಸಾವು

ಕೋವಿಡ್ ಸೊಂಕಿನೊಂದಿಗೆ ರವಿವಾರ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪಡುಬಿದ್ರಿ ಸಮೀಪದ ಎಲ್ಲೂರಿನ 54 ವರ್ಷ ಪ್ರಾಯದ ಮಹಿಳೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಧುಮೇಹ ಹಾಗೂ ಇತರ ಕಾಯಿಲೆಗಾಗಿ ಚಿಕಿತ್ಸೆಗೆ ಬಂದ ಮಹಿಳೆಗೆ ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಯ ಐಸಿಯುಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಾರ್ಕಳ ತಾಲೂಕು ನಕ್ರೆಯ 67 ವರ್ಷ ಪ್ರಾಯದ ವೃದ್ಧರು ಹೃದಯ ಸಮಸ್ಯೆ ಹಾಗೂ ಮಧುಮೇಹ ಸಮಸ್ಯೆಯೊಂದಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂದು ಅವರು ಮೃತಪಟ್ಟಿದ್ದಾರೆ.

ರವಿವಾರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಬೆಂಗಳೂರು, ಹಾವೇರಿ, ಹರಿಹರ ಹಾಗೂ ದಾವಣಗೆರೆಯ ಹಿರಿಯ ನಾಗರಿಕರು ಕೊರೋನ ಪಾಸಿಟಿವ್ ಸೋಂಕಿನೊಂದಿಗೆ ಇಂದು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top