ಬೈಕ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
ಕೋಟ, ಆ.7: ಚಿತ್ರಪಾಡಿ ಶಾಲೆ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.6ರಂದು ಸಂಜೆ 6.15ರ ಸುಮಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಚಿತ್ರಪಾಡಿಯ ಲಲಿತಾ ಆಚಾರ್(68) ಎಂದು ಗುರುತಿಸಲಾ ಗಿದೆ.
ಸಾಲಿಗ್ರಾಮ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಲಲಿತಾಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರ ರಾಘವೇಂದ್ರ ಹಾಗೂ ಲಲಿತಾ ತೀವ್ರವಾಗಿ ಗಾಯಗೊಂಡರೆನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಲಲಿತಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story