ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ನೀರ್ಪಾಡಿ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಕುಶಾಲಪ್ಪ (50) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಸಮೀಪದ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದರು ಎಂದು ದೂರಲಾಗಿದೆ. ಮೃತರು ಪತ್ನಿ ಮತ್ತು ಇಬ್ನರು ಪುತ್ರರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story