ಉಡುಪಿ ಜಿಲ್ಲೆಯಲ್ಲಿ ಸರಳ ಸ್ವಾತಂತ್ರ್ಯೋತ್ಸವ; ನೇರ ಪ್ರಸಾರ
ಉಡುಪಿ, ಆ.13: ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಆ.15ರ ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡಿ ನಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ.
ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಧ್ವಜಾರೋಹಣ ನೇರವೇರಿಸಿ, ಸ್ವಾತಂತ್ರೋತ್ಸವ ಸಂದೇಶವನ್ನು ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕೋವಿಡ್-19ರಿಂದಾಗಿ ಹೆಚ್ಚಿನ ಜನಸಂದಣಿ ಸೇರಲು ಅವಕಾಶವಿಲ್ಲದ ಕಾರಣ ಈ ಬಾರಿಯ ಆಚರಣೆ ಸರಳವಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಕಾರ್ಯಕ್ರಮ ವೀಕ್ಷಿಸಲು ಅನುಕೂಲ ವಾಗುವಂತೆ ಇದರ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಈ ಕೆಳಗಿನ ಲಿಕ್ಗಳನ್ನು ಬಳಸಿಕೊಂಡು ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1.Webcast URL : http://udupi.nic.in/webcast
2.Facebook Live cast # Tag;- #dcudupi, #Aug15udupi, #dcudupilive