ಬಾಲಕಿಗೆ ಕಿರುಕುಳ ಪ್ರಕರಣ : ಓರ್ವ ಯುವಕನ ವಿರುದ್ಧ ದೂರು
ಪುತ್ತೂರು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ದೂರಿನ ಹಿನ್ನೆಲೆಯಲ್ಲಿ ಓರ್ವ ಯುವಕನ ವಿರುದ್ಧ ಸಂಪ್ಯ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಹರೀಶ್ ಎಂಬಾತನ ವಿರದ್ಧ ಪ್ರಕರಣ ದಾಖಲಾಗಿದ್ದು, ಈತ ಅಪ್ರಾಪ್ತ ಬಾಲಕಿಯನ್ನು ಮದುವೆ ಯಾಗುವುದಾಗಿ ನಂಬಿಸಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ.
ಬಾಲಕಿಯ ತಾಯಿ ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.
Next Story