ಕಾಪು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಯುವತಿ ಮೃತ್ಯು
ನಾಲ್ವರಿಗೆ ಗಂಭೀರ ಗಾಯ
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಡಿವೈಡರ್ ನಡುವಿನ ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ.
ಮುಲ್ಕಿ ಐಕಳ ನಿವಾಸಿ ಅರ್ಷಿತ (21) ಮೃತರು ಎಂದು ಗುರುತಿಸಲಾಗಿದೆ. ಮುಂಬೈ ಮೂಲದ ನಿನ್ಹಾದ್ (19), ಅನೀಶ್ (21) ಕಾರು ಚಾಲಕ ಮಂಗಳೂರಿನ ನಿಹಾಲ್ ಹಾಗು ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.
ಮಂಗಳೂರಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಾಷ್ಟ್ರೀಯ ಹೆದ್ದಾರಿ 66 ರ ಕಾಪು ತಾಲೂಕು ಕಚೇರಿ ಮುಂಭಾಗದಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಯುವತಿ ಮೃತಪಟ್ಟಿದ್ದಾರೆ. ನಾಲ್ವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story