ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನಿಂದ ವಿಶ್ವ ಪರಿಸರ ದಿನಾಚರಣೆ
ಮಂಗಳೂರು, ಜೂ.7: ನಗರದ ಖ್ಯಾತ ಚಿನ್ನ, ವಜ್ರಾಭರಣಗಳ ಮಳಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಪರಿಸರ ದಿನಾವರಣೆಯನ್ನು ಆಚರಿಸಲಾಯಿತು.
ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರದ ಫಳ್ನೀರ್ ರಸ್ತೆಯಿಂದ ಹೈಲ್ಯಾಂಡ್ ಜಂಕ್ಷನ್ವರೆಗಿನ ರಸ್ತೆಯನ್ನು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಕಾರ್ಪೊರೇಟರ್ ಅಬ್ದುರ್ರವೂಫ್, ಮಂಗಳೂರು ಮಹಾನಗರ ಪಾಲಿಕೆಯ ಪರಿಸರ ಇಲಾಖೆಯ ಇಂಜಿನಿಯರ್ ಮಧು, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಯ ಸಹಾಯಕ ಮುಖ್ಯಸ್ಥ ಶರತ್ಚಂದ್ರನ್ ಮತ್ತಿತರರು ಉಪಸ್ಥಿತರಿದ್ದರು.
Next Story