ಕೈಗಾರಿಕಾ ಸ್ಪಂದನ ಕಾರ್ಯಕ್ರಮ; ಅಹವಾಲು ಸಲ್ಲಿಸಲು ಸೂಚನೆ
ಉಡುಪಿ, ಸೆ.16: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಜಿಲ್ಲಾಮಟ್ಟದ ಕೈಗಾರಿಕಾಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒಗಿಸುವ ಬಗ್ಗೆ ಚರ್ಚಿಸಲಾಗುವುದು.
ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು/ ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಸೆಪ್ಟಂಬರ್ 26ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0820-2575650ನ್ನು ಸಂಪರ್ಕಿಸು ವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story