ಕಾರು ಢಿಕ್ಕಿ; ಮಹಿಳೆ ಮೃತ್ಯು
ಬ್ರಹ್ಮಾವರ, ಸೆ.17: ಕೊಳಲಗಿರಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.16ರಂದು ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸುಮತಿ ಭಟ್(57) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಮಾರುತಿ ವ್ಯಾಗನಾರ್ ಕಾರು, ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಅಂಚಿನಲ್ಲಿ ನಿಂತಿದ್ದ ಸುಮತಿ ಭಟ್ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಅಪಘಾತ ನಡೆಸಿದ ಬಳಿಕ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story