ಸೆ. 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ರಸ್ತೆ ತಡೆ,ಪ್ರತಿಭಟನೆ
ಮಂಗಳೂರು : ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ಹೊರಟಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಇನ್ನಿತರೆ ಸುಗ್ರೀವಾಜ್ಞೆ ಕಾಯ್ದೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಸಂಧಾನ ಸಭೆ ವಿಫಲವಾದ ಹಿನ್ನೆಲೆ ಸೆ.28ರಂದು ಕರ್ನಾಟಕ ಬಂದ್ಗೆ ರೈತ, ದಲಿತ,ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬಂದ್ ರೈತರ ಪ್ರತಿಭಟನೆ ನಡೆಯಲಿದೆ ಮಂಗಳೂರು ಮಿನಿ ವಿಧಾನಸೌಧದ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.ಸುಳ್ಯ ಮತ್ತು ಬಿ.ಸಿ.ರೋಡಿನಲ್ಲಿ ರಸ್ತೆ ತಡೆ ಮೂಲಕ ರೈತರ ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ರವಿ ಕಿರಣ ಪುಣಚ ತಿಳಿಸಿದ್ದಾರೆ.
Next Story