ಮಂಗಳೂರು: ಬ್ಯಾಂಕ್ ಆಫ್ ಬರೋಡದಲ್ಲಿ ಬೆಂಕಿ ಅನಾಹುತ
ಮಂಗಳೂರು, ಸೆ. 30: ನಗರದ ಬಲ್ಮಠದಲ್ಲಿರುವ ಬ್ಯಾಂಕ್ ಆಫ್ ಬರೋಡದ ಶಾಖಾ ಕಚೇರಿಯಲ್ಲಿ ಇಂದು ಮುಂಜಾನೆ ಬೆಂಕಿ ಅನಾಹುತ ಸಂಭವಿಸಿದೆ.
ಮುಂಜಾನೆ 5:30ರಿಂದ 6 ಗಂಟೆಯ ಮಧ್ಯೆ ಈ ಅನಾಹುತ ಸಂಭವಿಸಿದೆ ಎನ್ನಲಾಗುತ್ತಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ ನಡೆದಿದೆ ಎಂದು ಹೇಳಲಾಗುತ್ತಿದೆ. ದುರಂತದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.