ಅತ್ಯಾಚಾರ ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕ್ಯಾಂಡಲ್ ಹಿಡಿದು ಪ್ರತಿಭಟನೆ
ಉಡುಪಿ, ಅ.1: ಉತ್ತರ ಪ್ರದೇಶದ ಹತ್ರಾಸ್ ಹಾಗೂ ಬಲಾರಾಂಪುರದ ಇಬ್ಬರು ದಲಿತ ಯುವತಿಯರ ಮೇಲಿನ ಅತ್ಯಾಚಾರ ಹಾಗೂ ಸಾವಿನ ಪ್ರಕರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿ ಯಿಂದ ಗುರುವಾರ ಕಾಂಗ್ರೆಸ್ ಭವನದ ಎದುರು ಕ್ಯಾಂಡಲ್ ಬೆಳಗಿಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ವರೋನಿಕಾ ಕರ್ನೆಲಿಯೋ, ಉತ್ತರ ಪ್ರದೇಶದಲ್ಲಿ ನಡೆದ ಪೈಶಾಚಿತ ಕೃತ್ಯಗಳಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ. ಇದರ ವಿರುದ್ಧ ಹೋರಾಟ ನಡೆಸಿದರೆ ಮಾತ್ರ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ ವಾಗುತ್ತದೆ ಎಂದು ಹೇಳಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಮುಖಂಡರಾದ ಡಾ.ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಐಡಾ ಗಿಬ್ಬಾ ಡಿಸೋಜ, ರೋಶಿನಿ ಒಲಿವೇರಾ, ಮೀನಾಕ್ಷಿ ಮಾಧವ ಬನ್ನಂಜೆ ಮೊದಲಾದವರು ಉಪಸ್ಥಿತರಿದ್ದರು.
Next Story