ಕೋಳಿ ಅಂಕಕ್ಕೆ ದಾಳಿ: ನಾಲ್ವರ ಬಂಧನ, 2 ಕೋಳಿ ವಶ
ಬಂಟ್ವಾಳ, ಸೆ.5: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡು ಗ್ರಾಮದ ದೇವಸ್ಯ ಬಾರೆಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು, ನಾಲ್ವರನ್ನು ಬಂಧಿಸಿ ಎರಡು ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಬೋಳಂತೂರು ಗ್ರಾಮದ ಕಲ್ಪಣೆ ನಿವಾಸಿಗಳಾದ ಹರಿಶ್ಚಂದ್ರ(28), ಮೋನಪ್ಪ(40), ಸಂಜೀವ(40) ಹಾಗೂ ಜಯಂತ(32) ಬಂಧಿತ ಆರೋಪಿಗಳಾಗಿದ್ದಾರೆ. ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣೆ ಎಸ್ಸೈ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಸಿಬ್ಬಂದಿಯಾದ ರಮೇಶ, ಹರಿಶ್ಚಂದ್ರ, ಚಿದಾನಂದ, ಶ್ರೀಧರ, ಪ್ರವೀಣ್ ಕುಮಾರ್ ತಂಡ ಈ ಕಾರ್ಯಾಚರಣೆ ನಡೆಸಿದೆ. ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಹಲವರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದು, ನಾಲ್ವರು ಮಾತ್ರ ಸೆರೆಯಾಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
Next Story